HomeNew postsWaqf board-ವಕ್ಫ್ ಬೋರ್ಡ ಹೆಸರಿಗೆ ರೈತರ ಖಾತೆ ರಾಜ್ಯ ಸರಕಾರದಿಂದ ಮಹತ್ವದ ಆದೇಶ!

Waqf board-ವಕ್ಫ್ ಬೋರ್ಡ ಹೆಸರಿಗೆ ರೈತರ ಖಾತೆ ರಾಜ್ಯ ಸರಕಾರದಿಂದ ಮಹತ್ವದ ಆದೇಶ!

ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಆಸ್ತಿ(Waqf board) ಎಂದು ನಮೂದಿಸಿರುವ ಪ್ರಕರಣಗಳ ಕುರಿತು ರಾಜ್ಯ ಸರಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ.

ವಿಜಯಪುರ, ದಾರವಾಡ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರ ಜಮೀನಿನ ಪಹಣಿಯಲ್ಲಿ(RTC) ವಕ್ಫ್ ಆಸ್ತಿ ಎಂದು ಬಂದಿರುವುದರ ಕುರಿತಂತೆ ದೊಡ್ಡ ಮಟ್ಟದಲ್ಲಿ ವಿವಾದ ಹುಟ್ಟಿಕೊಂಡಿತ್ತು ಈ ಕುರಿತು ರಾಜ್ಯ ಸರಕಾರದಿಂದ ನೂತನ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Waqf board-ಏನಿದು ವಕ್ಫ್ ಕಾಯ್ದೆ? ಇದರಿಂದ ರೈತರಿಗೆ ಹೇಗೆ ತೊಂದರೆಯಾಗುತ್ತದೆ? ಇಲ್ಲಿದೆ ಸಂಪೂರ್ಣ ವಿವರ!

ರೈತರ ಜಮೀನಿನ ಪಹಣಿಯ 11 ನೇ ಕಾಲಂ ನಲ್ಲಿ ವಕ್ಫ್ ಆಸ್ತಿ ಎಂದು ವಿವಿಧ ಜಿಲ್ಲೆಗಳಲ್ಲಿ ಬಂದಿದ್ದು ರೈತರು ಈ ಕುರಿತು ಪ್ರತಿಭಟನೆಯನ್ನು ಸಹ ಮಾಡಿದ್ದರು ಕಂದಾಯ ಇಲಾಖೆ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡುವ ಕುರಿತು ಕಂದಾಯ ಇಲಾಖೆಯ ಅಪರ ಕಾರ್ಯದರ್ಶಿ ಡಾ| ಬಿ ಉದಯ ಕುಮಾರ್ ಶೆಟ್ಟಿ ರವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ನೂತನ ಆದೇಶ ಹೊರಡಿಸಿದ್ದಾರೆ.

Waqf board-ವಕ್ಫ್ ಆಸ್ತಿ ಕುರಿತು ರಾಜ್ಯ ಸರಕಾರದಿಂದ ಮಹತ್ವದ ಆದೇಶ:

ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ವಕ್ಫ್ ಆಸ್ತಿ ವಿವಾದದ ಕುರಿತು ಕಂದಾಯ ಇಲಾಖೆಯ ಅಪರ ಕಾರ್ಯದರ್ಶಿಗಳು ಈ ಕೆಳಗಿನಂತೆ ಆದೇಶ ಹೊರಡಿಸಿದ್ದಾರೆ.

ಕೆಲವು ರೈತರ ಹಾಗೂ ಇತರ ಆಸ್ತಿಗಳನ್ನು ವಕ್ಫ್ ಹೆಸರಿಗೆ ಖಾತೆ ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಸಭೆಯನ್ನು ನಡೆಸಿ ಈ ಕೆಳಕಂಡಂತೆ ಸೂಚನೆಯನ್ನು ನೀಡಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Bele sala-ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯಲು ವೆಬ್ಸೈಟ್ ಲಿಂಕ್!

1) ವಕ್ಫ್ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಮ್ಯುಟೇಷನ್ ಮಾಡಲು ಯಾವುದೇ ಕಚೇರಿ ಅಥವಾ ಯಾವುದೇ ಪ್ರಾಧಿಕಾರದಿಂದ ನೀಡಲಾಡ ನಿರ್ದೇಶನಗಳನ್ನು ತಕ್ಷಣದಿಂದಲೇ ಹಿಂಪಡೆಯಬೇಕು ಹಾಗೂ ಮ್ಯುಟೇಷನ್ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

2) ವಕ್ಫ್ ಆಸ್ತಿ ಕುರಿತು ನೀಡಲಾದ ಎಲ್ಲಾ ನೋಟಿಸುಗಳನ್ನು ಹಿಂಪಡೆಯುವಂತೆ ಸೂಚಿಸಲಾಗಿದೆ.

3) ಜಮೀನುಗಳಲ್ಲಿ ವ್ಯವಸಾಯ ಮಾಡುತ್ತಿರುವ ರೈತರುಗಳ ವಿರುದ್ದ ಯಾವುದೇ ಕ್ರಮವನ್ನು ಜರುಗಿಸತಕ್ಕದಲ್ಲ ಎಂದು ಸೂಚಿಸಲಾಗಿದೆ.

ಈ ಮೇಲಿನ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈ ಆದೇಶದಲ್ಲಿ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: PM Kisan E-kyc list- ಪಿಎಂ ಕಿಸಾನ್ ಇ-ಕೆವೈಸಿ ಆಗದ 4.7 ಲಕ್ಷ ರೈತರ ಪಟ್ಟಿ ಬಿಡುಗಡೆ!

ಅಧಿಕೃತ ಆದೇಶದ ಪ್ರತಿ:

Waqf board

Waqf Act- ವಕ್ಫ್ ಕಾಯ್ದೆಯಿಂದ ರೈತರಿಗೆ ಅಗುವ ಅನಾನುಕೂಲಗಳು?

ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿದರೆ ಇದನ್ನು ಸರಿಪಡಿಸುವುದು ತುಂಬಾ ಕಷ್ಟಕರವಾಗಿದ್ದು ಯಾವ ಬ್ಯಾಂಕ್ ಮೂಲಕವು ಬೆಳೆ ಸಾಲ ಸೇರಿದಂತೆ ಇತರೆ ಯಾವುದೇ ಬಗ್ಗೆಯ ಸಾಲವನ್ನು ಪಡೆಯಲು ಸಾದ್ಯವಾಗುವುದಿಲ್ಲ.

ಜಮೀನಿನ ಮಾಲೀಕತ್ವ ಕಳೆದುಕೊಳ್ಳಬೇಕಾಗುತ್ತದೆ ಈ ಜಮೀನಿನ ಮೇಲಿರುವ ಹಕ್ಕ ಮಂಡಳಿಗೆ ಸೇರಿ ರೈತರು ಜಮೀನನ್ನು ಮಾರಾಟ ಮಾಡಲು ಸಹ ಆಗುವುದಿಲ್ಲ.

Most Popular

Latest Articles

- Advertisment -

Related Articles