HomeNew postsWeather forecast- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ! ರಾಜ್ಯದ ಮಳೆ ಮುನ್ಸೂಚನೆ ವಿವರ ಹೀಗಿದೆ.

Weather forecast- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ! ರಾಜ್ಯದ ಮಳೆ ಮುನ್ಸೂಚನೆ ವಿವರ ಹೀಗಿದೆ.

Karnataka rain fall: ಕರ್ನಾಟಕ ಮಳೆ ಮುನ್ಸೂಚನೆ ನಕ್ಷೆಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯ ಹೆಬ್ರಿ ಭಾಗದ ವರಂಗ ವ್ಯಾಪ್ತಿಯಲ್ಲಿ ಅತ್ಯಧಿಕ 112 ಮಿಮೀ ಮಳೆ ದಾಖಲಾಗಿರುತ್ತದೆ. ಉಳಿದಂತೆ ಕರ್ನಾಟಕದ ಕರಾವಳಿ ಮತ್ತು ಮಳೆನಾಡು , ಬೆಂಗಳೂರು, ಮಂಡ್ಯ, ಮೈಸೂರಿನ ಅಲ್ಲಲ್ಲಿ ಮಳೆ ಬಂದಿರುತ್ತದೆ.

ಈ ಅಂಕಣದಲ್ಲಿ ನಾಳೆ ಬೆಳ್ಳಗೆ 8-30 ರವರೆಗಿನ ಮಳೆ ಮುನ್ಸೂಚನೆ ಮತ್ತು ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಮಾಹಿತಿಯನ್ನು ತಿಳಿಸಿರುವುದರ ಜೊತೆಗೆ ಪ್ರಸ್ತುತ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಸಂಗ್ರಹಣೆಯ ಮಾಹಿತಿಯನ್ನು ಸಹ ಹಾಕಲಾಗಿದೆ.

Tommorrow Weather- ನಾಳೆ ಬೆಳಿಗ್ಗೆ(18-10-2023) 8-30ರ ವರೆಗಿನ ರಾಜ್ಯದ ಹವಾಮಾನ ಮುನ್ಸೂಚನೆ:

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇರುತ್ತದೆ.

ಇದನ್ನೂ ಓದಿ:  PMUY Yojana- ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಕನೆಕ್ಷನ್‌ ಪಡೆಯಲು ಅರ್ಜಿ ಆಹ್ವಾನ!

ಚಿಕ್ಕಮಗಳೂರು, ಕೊಡಗು, ಹಾಸನ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಕರಾವಳಿ ಜೆಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.  ಬೆಂಗಳೂರು, ಮಂಡ್ಯ, ರಾಮನಗರ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇರುತ್ತದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇರುತ್ತದೆ. 

Karnataka cyclone– ವಾಯುಭಾರ ಕುಸಿತದ ಮಾಹಿತಿ:

ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಏಕಕಾಲದಲ್ಲಿ ವಾಯುಭಾರ ಕುಸಿತ ಉಂಟಾಗಲಿರುವುದರಿಂದ ಹಿಂಗಾರು ಆರೋಭ ಮತ್ತಷ್ಟು ವಿಳಂಬವಾಗುವ ಲಕ್ಷಣಗಳಿವೆ. ಒಕ್ಟೊಬರ್ 18ರಿಂದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಸಾಧ್ಯತೆ ಹೆಚ್ಚಿದೆ. 

ಅಕ್ಟೊಬರ್ 20ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇರುತ್ತದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಉತ್ತರಕ್ಕೂ, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಕ್ಕೂ ಚಲಿಸುವ ಲಕ್ಷಣಗಳಿವೆ.

ಇದನ್ನೂ ಓದಿ: Ration card news: ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸಲ್ಲಿಕೆ ಕುರಿತು ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ!

Next 7 days weather in karnataka- ರಾಜ್ಯದ ಮುಂದಿನ ಒಂದು ವಾರದ ಮಳೆ ಮುನ್ಸೂಚನೆ ವಿವರ ಹೀಗಿದೆ:

ಮುಂದಿನ ಒಂದು ವಾರದ ಮಳೆ ಮುನ್ಸೂಚನೆ ಈ ಮೇಲಿನ ನಕ್ಷೆಯಲ್ಲಿ ವಿವಿಧ ಬಣ್ಣದಿಂದ ಸೂಚಿಸಿರುವಂತೆ ಕೆಂಪು ಬಣ್ಣದಿಂದ ಗುರುತಿಸಿರುವ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ಸಾಧ್ಯತೆ ಇರುತ್ತದೆ ಉಳಿದಂತೆ ಹಳದಿ ಮತ್ತು ಹಸಿರು ಬಣ್ಣದಿಂದ ಸೂಚಿಸಿರುವ ಪ್ರದೇಶದಲ್ಲಿ ಮಧ್ಯಮ ಪ್ರಮಾಣದ ಮಳೆ ಸಾಧ್ಯತೆ ಇರುತ್ತದೆ. ನೀಲಿ ಬಣ್ಣ ಸಾಧಾರಣ ಮಳೆ ಮುನ್ಸೂಚನೆ ಸೂಚಿಸುತ್ತದೆ.

Karnataka Dam water level-ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ(17-10-2023):

ಇದನ್ನೂ ಓದಿ: October Pension amount-2023: 77.6 ಲಕ್ಷ ಫಲಾನುಭವಿಗಳಿಗೆ ಅಕ್ಟೋಬರ್ ತಿಂಗಳ ಪಿಂಚಣಿ ಹಣ ಜಮೆ! ನಿಮಗೆ ಬಂತಾ ಚೆಕ್ ಮಾಡಿ.

Most Popular

Latest Articles

Related Articles