Women SHG Subsidy-ಮಹಿಳಾ ಸ್ವ-ಸಹಾಯ ಯೋಜನೆಯಡಿ 2.00 ಲಕ್ಷ ಸಹಾಯಧನ!

September 3, 2026 | Siddesh
Women SHG Subsidy-ಮಹಿಳಾ ಸ್ವ-ಸಹಾಯ ಯೋಜನೆಯಡಿ 2.00 ಲಕ್ಷ ಸಹಾಯಧನ!
Share Now:

2026-2027 ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಯ ಅಡಿಯಲ್ಲಿ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು 2 ಲಕ್ಷ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕ್ರಿಶ್ಚಿಯನ್ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಂತ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾಲಂಬಿಯನ್ನಾಗಿ ಮಾಡುವ ಉದ್ದೇಶದಿಂದ ರಾಷ್ಟೀಕೃತ/ಶೆಡ್ಯೂಲ್‌ ಬ್ಯಾಂಕ್/RBI ನಿಂದ ಮಾನ್ಯತೆ ಪಡೆದ ವಿವಿಧ ಆರ್ಥಿಕ ಸಂಸ್ಥೆಗಳಿಂದ ಪಡೆಯುವ ಸಾಲಕ್ಕೆ ಘಟಕವೆಚ್ಚದ ಶೇ.50 ಅಥವಾ ಗರಿಷ್ಠ ರೂ.2.00 ಲಕ್ಷ ಸಹಾಯಧನವನ್ನು ನಿಗಮದಿಂದ ನೀಡಲಾಗುತ್ತದೆ.

ಇದನ್ನೂ ಓದಿ: Subsidy Schemes 2026: ಕರ್ನಾಟಕ ಆರ್ಯ ವೈಶ್ಯ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!

ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಹರು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Last Date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-Sep-2026

Documemts Required-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು?

ಅರ್ಜಿ ಸಲ್ಲಿಸಲು ಕೆಳಗೆ ತಿಳಿಸಿರುವ ದಾಖಲಾತಿಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು:

ಸ್ವಸಹಾಯ ಗುಂಪಿನ ಸ್ವಯಂ ಉದ್ಯೋಗ ಚಟುವಟಿಕೆಯ ಯೋಜನಾ ವರದಿ.

ಸ್ವಸಹಾಯ ಗುಂಪಿನ ಬ್ಯಾಂಕ್‌ ಪಾಸ್‌ ಪುಸ್ತಕದ ಪ್ರತಿ.

ಸ್ವ-ಸಹಾಯ ಸಂಘದ ಎಲ್ಲಾ ಸದಸ್ಯರ ಸಾಮೂಹಿಕ ಫೋಟೋ.

ಸ್ವಸಹಾಯ ಸಂಘದ ಸಾಮಾನ್ಯ ಸಭೆ ನಡವಳಿ ಪುಸ್ತಕದ ಪ್ರತಿ.

ಉಪ ನಿಬಂಧಕರು , ಸಹಕಾರ ಇಲಾಖೆ ಇವರಿಂದ ಪಡೆದ ಸಂಘದ ನೋಂದಣಿ ಪತ್ರ.

ಇದನ್ನೂ ಓದಿ: Ganga Kalyana Scheme-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ!

Eligibility Critiria-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು?

A. ಸಹಾಯಧನ ಪಡೆಯುವ ಸ್ವ-ಸಹಾಯ ಗುಂಪುಗಳು ಕ್ರಿಶ್ಚಿಯನ್‌ ಸಮುದಾಯಕ್ಕೆ ಸೇರಿದ ಮಹಿಳೆಯರಾಗಿರಬೇಕು.

B. ಮಹಿಳಾ ಸ್ವಸಹಾಯ ಸಂಘದ ಸದಸ್ಯರು ರಾಜ್ಯದ ಖಾಯಂ ನಿವಾಸಿಗಳಾಗಿರತಕ್ಕದ್ದು.

C. ಮಹಿಳಾ ಸ್ವ-ಸಹಾಯ ಗುಂಪಿನ ಸದಸ್ಯರ ಸಂಖ್ಯೆ 10 ರಿಂದ 20 ರ ಒಳಗಿರಬೇಕು.

D. ಮಹಿಳಾ ಸ್ವಸಹಾಯ ಸಂಘದಲ್ಲಿ ಒಂದು ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶವಿರುತ್ತದೆ.

E. ಮಹಿಳಾ ಸ್ವಸಹಾಯ ಸಂಘದ ಸದಸ್ಯರ ಕುಟುಂಬದ ಆದಾಯ ರೂ.6.00 ಲಕ್ಷ ಮೀರಿರಬಾರದು.

F. ಸ್ವಸಹಾಯ ಸಂಘದ ಸದಸ್ಯರ ವಯಸ್ಸು 18 ರಿಂದ 55 ವರ್ಷಗಳ ಒಳಗಿರತಕ್ಕದ್ದು.

G. ಸ್ವಸಹಾಯ ಸಂಘವು ಕಡ್ಡಾಯವಾಗಿ ಉಪನೊಂದಾವಣಿ ಅಧಿಕಾರಿಯವರಿಂದ ನೊಂದಣಿಯಾಗಿರತಕ್ಕದ್ದು.

ಇದನ್ನೂ ಓದಿ: MBA Scholorship-ಎಂಬಿಎ, ಪಿಜಿಡಿಎಂ,ಪಿಜಿಪಿ ವಿದ್ಯಾರ್ಥಿಗಳಿಗೆ 8 ಲಕ್ಷದವರೆಗೆ ವಿದ್ಯಾರ್ಥಿವೇತನ!

H. ಸ್ವಸಹಾಯ ಸದಸ್ಯರ ಕುಟುಂಬದ ಯಾವುದೇ ಸದಸ್ಯರು ರಾಜ್ಯ/ಕೇಂದ್ರ ಸರ್ಕಾರದ ಉದ್ಯೋಗಿಗಳಾಗಿರಬಾರದು.

I. ಸಂಘದ ಸದಸ್ಯರು ಅಥವಾ ಅವರ ಕುಟುಂಬದ ಸದಸ್ಯರು ಅರಿವು ಮತ್ತು ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಗಳನ್ನು ಹೊರತುಪಡಿಸಿ ಕಳೆದ 5 ವರ್ಷಗಳಲ್ಲಿ ನಿಗಮದಿಂದ ಯಾವುದೇ ಸಾಲ/ಸಹಾಯಧನ ಸೌಲಭ್ಯ ಪಡೆದಿರಬಾರದು
ಸ್ವಸಹಾಯ ಸಂಘದ ಸದಸ್ಯರು ನಿಗಮದ ಸುಸ್ಥಿದಾರರಾಗಿರಬಾರದು.

J. ಮಹಿಳಾ ಸ್ವಸಹಾಯ ಗುಂಪು ನಿಯಮಿತವಾಗಿ ಸಭೆಗಳನ್ನು ನಡೆಸತಕ್ಕದ್ದು (ಕನಿಷ್ಠ ತಿಂಗಳಿಗೆ ಒಂದು ಸಭೆ)
ಸ್ವಸಹಾಯ ಗುಂಪು ನಿಗದಿತವಾಗಿ ಉಳಿತಾಯ ಮಾಡುವುದು ಮತ್ತು ಸ್ವಸಹಾಯ ಗುಂಪಿನ ಉಳಿತಾಯದ ಮೊತ್ತದಿಂದ ಗುಂಪಿನ ಸದಸ್ಯರಿಗೆ ಅವಶ್ಯಕತೆಗೆ ತಕ್ಕಂತೆ ಆಂತರಿಕ ಸಾಲವನ್ನು ನೀಡುವುದು.

K. ಆಂತರಿಕ ಸಾಲದ ಮರುಪಾವತಿಗೆ ಒತ್ತುನೀಡಿ ಸಾಲದ ಮರುಪಾವತಿ ಉತ್ತಮವಾಗಿರುವ ಸ್ವಸಹಾಯ ಸಂಘಗಳಿಗೆ ನಿಗಮದಿಂದ ಸಹಾಯಧನ ನೀಡಲು ಹೆಚ್ಚಿನ ಆದ್ಯತೆ ನೀಡಲಾಗುವುದು.

L. ಸ್ವಸಹಾಯ ಗುಂಪಿನ, ದಾಖಲೆ ಪುಸ್ತಕಗಳನ್ನು ಸಮರ್ಪಕವಾಗಿ ನಿರ್ವಹಿಸುವುದು.

M. ನಿಗಮದ ಸಹಾಯಧನ ಪಡೆಯಲು ಸ್ವಸಹಾಯ ಗುಂಪು ರಚನೆಯಾಗಿ ಕನಿಷ್ಠ 6 ತಿಂಗಳಾಗಿರಬೇಕು.

ಇದನ್ನೂ ಓದಿ: Fish Farming subsidy-ಮೀನುಗಾರಿಕೆ ಇಲಾಖೆಯಡಿ ಮೀನುಗಾರಿಕೆ ಸಲಕರಣೆ ಕಿಟ್ ಪಡೆಯಲು ಅರ್ಜಿ!

SHG subsidy

ಇದನ್ನೂ ಓದಿ: Taxi Subsidy Scheme-ಸ್ವಾವಲಂಬಿ ಸಾರಥಿ ಯೋಜನೆ ವಾಹನ ಖರೀದಿಗೆ 3.0 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Online Application Process-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ?

Step-1: ಅರ್ಜಿದಾರ ಮಹಿಳಾ ಅಭ್ಯರ್ಥಿಯು ಮೊದಲು ಇಲ್ಲಿ ನೀಡಿರುವ ಲಿಂಕ್ "Online Application" ಮೇಲೆ ಕ್ಲಿಕ್ ಮಾಡಿ ಅಧಿಕೃತ "ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ"ದ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ನಂತರ ಅದೇ ಪುಟದಲ್ಲಿ ಕಾಣುವ "ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ" ಯ ಮುಂದೆ ಕಾಣಿಸುವ "ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ಅರ್ಜಿದಾರರೇನಾದರು ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಭೇಟಿ ಮಾಡುತ್ತಿದ್ದರೆ? ಹಾಗದರೆ ಇಲ್ಲಿ ನೋಂದಾಯಿಸಿ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ 10 ಅಂಕಿಯ ಮೊಬೈಲ್ ನಂಬರ್ ಅನ್ನು ಹಾಕಿ OTP ಅನ್ನು ಪಡೆದು ಬಳಕೆದಾರ ಐಡಿಯನ್ನು ನೋಂದಣಿ ಮಾಡಿಕೊಂಡು Password ಅನ್ನು ಸಿದ್ದ ಮಾಡಿಕೊಂಡು Log In ಆಗಬೇಕು.

Step-4: ಲಾಗಿನ್ ಆದ ನಂತರ ಅಧಿಕೃತ ಅರ್ಜಿ ಪ್ರತಿ ಓಪನ್ ಆಗುತ್ತದೆ. ನಂತರ ಅಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನ!

For More Information-ಸಹಾಯಧನದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯು ಬೇಕಾದಲ್ಲಿ ಇಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ: Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: