ಯಶಸ್ವಿನಿ ಕಾರ್ಡ ಪಡೆಯಲು(Yashaswini Card) ಅರ್ಹ ಅರ್ಜಿದಾರರು ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಇಲಾಖೆಯಿಂದ ಇನ್ನು 2 ದಿನ ಮಾತ್ರ ಅವಕಾಶ ನೀಡಲಾಗಿದ್ದು ಯಾರೆಲ್ಲೆ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.
ಸಹಕಾರಿ ಸಂಘದ ಸದಸ್ಯರಿಗೆ ವೈದ್ಯಕೀಯ ವೆಚ್ಚವನ್ನು ಭರಿಸಲು ನೆರವು ನೀಡಲು ಆರೋಗ್ಯ ವಿಮೆಯನ್ನು ಒದಗಿಸಲು ಯಶಸ್ವಿನಿ ಯೋಜನೆಯಡಿ ಯಶಸ್ವಿನಿ(Yashaswini Yojana) ಕಾರ್ಡ ಅನ್ನು ಪಡೆಯಲು ರಾಜ್ಯ ಸರಕಾರದಿಂದ ಅವಕಾಶ ನೀಡಲಾಗಿದೆ.
ಯಶಸ್ವಿನಿ ಯೋಜನೆಯಡಿ(Yashaswini Scheme Application) ಅರ್ಜಿ ಸಲ್ಲಿಸಿ ಕಾರ್ಡ ಪಡೆದುಕೊಳ್ಳಲು ಇನ್ನು ಎರಡು ದಿನ ಮಾತ್ರ ಅವಕಾಶವಿದ್ದು ಆಸಕ್ತ ಅರ್ಹ ಅರ್ಜಿದಾರರು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಅವಕಾಶವಿದ್ದು, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಯೋಜನೆಯಡಿ ಯಾವೆಲ್ಲ ಪ್ರಯೋಜನ ಪಡೆಯಬಹುದು? ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Ration Card News-ರೇಶನ್ ಕಾರ್ಡ ಹೊಂದಿರುವವರು ಈ ಕೆಲಸ ಮಾಡಲು ಇನ್ನು 3 ದಿನ ಮಾತ್ರ ಬಾಕಿ!
How Can Apply For Yashaswini Yojana-ಅರ್ಜಿ ಸಲ್ಲಿಸಲು ಅರ್ಹರು:
1) ಯಾವುದೇ ಬಗ್ಗೆಯ ಸಹಕಾರಿ ಸಂಘದಲ್ಲಿ ಸದಸ್ಯರಾಗಿರುವವರು ಅರ್ಜಿ ಸಲ್ಲಿಸಬಹುದು.
2) ಸರಕಾರಿ ನೌಕರಿಯಲ್ಲಿ ಇರುವವರನ್ನು ಹೊರತುಪಡಿಸಿ ಹಾಗೂ ಅರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿರುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ.
3) ಒಬ್ಬ ವ್ಯಕ್ತಿ ಖಾಸಗಿ ಕಂಪನಿ ಅಥವಾ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮಾಸಿಕ ರೂ.30,000/-ಕ್ಕಿಂತ ಹೆಚ್ಚು ಒಟ್ಟು ವೇತನ ಪಡೆಯುತ್ತಿದ್ದಲ್ಲಿ ಅಥವಾ ಒಬ್ಬ ವ್ಯಕ್ತಿ ಯಾವುದೇ ಆರೋಗ್ಯ ವಿಮಾ ಯೋಜನೆಯಡಿಯಲ್ಲಿ ಸದಸ್ಯರಾಗಿದ್ದಲ್ಲಿ ಅಂತಹವರು ಯಶಸ್ವಿನಿ ಯೋಜನೆಯಡಿ ಸದಸ್ಯರಾಗಲು ಅರ್ಹರಿರುವುದಿಲ್ಲ.
4) ಯಶಸ್ವಿನಿ ಯೋಜನೆಯಲ್ಲಿನ ವ್ಯಾಖ್ಯಾನದಂತೆ “ಕುಟುಂಬ” ಎಂದರೆ ಪ್ರಧಾನ ಅರ್ಜಿದಾರರ (Principal Member) ತಂದೆ, ತಾಯಿ, ಗಂಡ/ಹೆಂಡತಿ, ಗಂಡು ಮಕ್ಕಳು, ಮದುವೆಯಾಗದ ಹೆಣ್ಣು ಮಕ್ಕಳು, ಸೊಸೆಯಂದಿರು ಮತ್ತು ಮೊಮ್ಮಕ್ಕಳು (ಗಂಡು ಮಕ್ಕಳ ಮಕ್ಕಳು) ಎಂದು ಅರ್ಥೈಯಿಸುವುದು. ಒಂದು ಮನೆಯಲ್ಲಿ ಸೊಸೆ ಪ್ರಧಾನ ಅರ್ಜಿದಾರರಾಗಿದ್ದಲ್ಲಿ ಅವರ ಗಂಡನ ತಂದೆ/ತಾಯಿ ಅಂದರೆ ಅರ್ಜಿದಾರರ ಅತ್ತೆ/ಮಾವ ಅರ್ಹ ಸದಸ್ಯರಾಗುತ್ತಾರೆ. ಆದರೆ ಅರ್ಜಿದಾರರ ತಂದೆ/ತಾಯಿಯವರನ್ನು ಸದಸ್ಯರನ್ನಾಗಿ ಸೇರಿಸಿಕೊಳ್ಳಲು ಬರುವುದಿಲ್ಲ.
ಇದನ್ನೂ ಓದಿ: Village Map-ನಿಮ್ಮ ಜಮೀನಿಗೆ ಹೋಗಲು ದಾರಿ ಸಮಸ್ಯೆಯೇ? ಇಲ್ಲಿದೆ ಅಧಿಕೃತ ದಾರಿ ನಕ್ಷೆ!

Last Date for Application-ಯಶಸ್ವಿನಿ ಕಾರ್ಡ ಪಡೆಯಲು ಪ್ರಮುಖ ದಿನಾಂಕಗಳು: ನೋಂದಣಿ ಮಾಡಿಕೊಳ್ಳಲು ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ- 01 ಡಿಸೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 31 ಡಿಸೆಂಬರ್ 2024
Yashashvini Card Fee-ಯಶಸ್ವಿನಿ ಕಾರ್ಡ ನೋಂದಣಿ ಶುಲ್ಕ:
1) ಕುಟುಂಬ ಒಂದಕ್ಕೆ ವಾರ್ಷಿಕ ರೂ.500/-ಗಳ ಶುಲ್ಕ ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬಕ್ಕೆ ಪ್ರತಿಯೊಬ್ಬ ಪ್ರತಿಯೊಬ್ಬ ಸದಸ್ಯರಿಗೆ ರೂ.100/- ಶುಲ್ಕ ಪಾವತಿ ಮಾಡಬೇಕು.
2) ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.1000/- ಗಳ ವಂತಿಗೆ ಮತ್ತು ನಾಲ್ಕಕ್ಕಿಂತ ಹೆಚ್ಚಿಗಿ ಸದಸ್ಯರುಗಳ ಕುಟುಂಬದ ಪ್ರತಿಯೊಬ್ಬ ಹೆಚ್ಚುವರಿ ಸದಸ್ಯರಿಗೆ ರೂ.200/-ಗಳನ್ನು ಪಾವತಿಸದ್ದು.
3) ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯ ಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರದಿಂದಲೇ ವೆಚ್ಚ ಭರಿಸಲಾಗುತ್ತದೆ.
ಇದನ್ನೂ ಓದಿ: Parihara Farmer list-ತಾಂತ್ರಿಕ ಸಮಸ್ಯೆಯಿಂದ ಬೆಳೆ ಪರಿಹಾರ ಜಮಾ ಅಗದ ರೈತರ ಪಟ್ಟಿ ಬಿಡುಗಡೆ!
How to Apply For Yashaswini Card-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?
ಯಶಸ್ವಿನಿ ಕಾರ್ಡ ಪಡೆಯಲು ಆಸಕ್ತ ಅರ್ಹ ಅರ್ಜಿದಾರರು ಅಗತ್ಯ ದಾಖಲಾತಿಗಳ ಸಮೇತ ನಿಮ್ಮ ಹತ್ತಿರದ ಸಹಕಾರಿ ಸಂಘದವನ್ನು ಕಚೇರಿ ಸಮಯದಲ್ಲಿ ನೇರವಾಗಿ ಭೇಟಿ ಮಾಡಿ ಅರ್ಜಿ ಸಲ್ಲಿಸಬೇಕು.
Yashaswini Card benefits- ಯಶಸ್ವಿನಿ ಕಾರ್ಡ ಬಳಕೆ ಮಾಡಿಕೊಂಡು ಯಾವೆಲ್ಲ ವೈದ್ಯಕೀಯ ಚಿಕಿತ್ಸೆಗಳನ್ನು ಪಡೆಯಬಹುದು?
1) ಪ್ರಸ್ತುತ ಯಶಸ್ವಿನಿ ಯೋಜನೆಯಡಿಯಲ್ಲಿ ಟ್ರಸ್ಟ್ ಗುರ್ತಿಸಿದ 1650 ವಿವಿಧ ಚಿಕಿತ್ಸೆಗಳು ಮತ್ತು 478 ICU ಚಿಕಿತ್ಸೆಗಳೂ ಸೇರಿದಂತೆ ಒಟ್ಟು 2128 ಚಿಕಿತ್ಸೆಗಳನ್ನು ಅಳವಡಿಸಿಕೊಳ್ಳಲಾಗಿದೆ.
2) ರೋಗಿಗಳಿಗೆ ಸದರಿ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದಲ್ಲಿ ನೋಂದಾಯಿಸಿದ ಯಶಸ್ಸಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಒದಗಿಸಲಾಗುವುದು. ನೆಟ್ವರ್ಕ್ ಆಸ್ಪತ್ರೆಗಳನ್ನು ಹೊರತುವಡಿಸಿ ಇತರ ಆಸ್ಪತ್ರೆಗಳಲ್ಲಿ ಯಶಸ್ವಿನಿ ಯೋಜನೆಯ ಸೇವೆ ಲಭ್ಯವಿರುವುದಿಲ್ಲ. ಯಶಸ್ವಿನಿ ಯೋಜನೆಯಡಿ ಫಲಾನುಭವಿ ಚಿಕಿತ್ಸೆ ಪಡೆಯುವ ಮೊದಲು ಆಸ್ಪತ್ರೆಯು ಯೋಜನೆಗೆ ಒಳಪಟ್ಟಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು ನಂತರ ಚಿಕಿತ್ಸೆ ಪಡೆಯತಕ್ಕದ್ದು,
3) ಯೋಜನೆಯಲ್ಲಿ ಒಳಪಡದ ಚಿಕಿತ್ಸೆಗಳ ಮತ್ತು ಟ್ರಸ್ಟ್ ಅಂಗೀಕರಿಸದ ಆಸ್ಪತ್ರೆಗಳಲ್ಲಿ ಪಡೆದಂತಹ ಚಿಕಿತ್ಸೆಗಳಿಗೆ ಯಶಸ್ವಿನಿ ಟ್ರಸ್ಟ್ ಜವಾಬ್ದಾರರಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಆಸ್ಪತ್ರೆಗಳಿಗಾಗಲಿ ಅಥವಾ ಫಲಾನುಭವಿಗಳಿಗಾಗಲಿ ಚಿಕಿತ್ಸಾ ವೆಚ್ಚವನ್ನು ಪಾವತಿಸಲಾಗುವುದಿಲ್ಲ.
4) ಎರಡು ಜೀವಂತ ಮಕ್ಕಳು ಅಥವಾ ಎರಡು ಹರಿಗೆಗೆ ಮಾತ್ರ ಯಶಸ್ವಿನಿ ಯೋಜನೆಯಲ್ಲಿ ಸೌಲಭ್ಯ ದೊರೆಯುತ್ತದೆ.
5) ಯಶಸ್ವಿನಿ ಯೋಜನೆಯ ಪ್ರೋಟೋಕಾಲ್ ಪ್ರಕಾರ ಯಶಸ್ವಿನಿ ಫಲಾನುಭವಿಗಳು ಜನರಲ್ ವಾರ್ಡನಲ್ಲಿ ಮಾತ್ರ ಚಿಕಿತ್ಸೆ ಪಡೆಯಲು ಅರ್ಹರಿರುತ್ತಾರೆ. ಒಂದು ವೇಳೆ ಯೋಜನೆಯಡಿ ನಿಗದಿಪಡಿಸಿರುವ ಜನರಲ್ ವಾರ್ಡ್ ಬದಲಾಗಿ ಉನ್ನತ(Semi Special Ward Or Special Ward)ನಲ್ಲಿ ಚಿಕಿತ್ಸೆ ಪಡೆಯಲು ಇಚ್ಚಿಸಿದಲ್ಲಿ, ಸದರಿ ಫಲಾನುಭವಿಗಳಿಗೆ ಯೋಜನೆಯಡಿ ನಿಗದಿ ಪಡಿಸಿರುವಂತೆ ಜನರಲ್ ವಾರ್ಡಗೆ ಅನ್ವಯಿಸುವ ಚಿಕಿತ್ಸೆಯ ವೆಚ್ಚವನ್ನು ಮಾತ್ರ ಭರಿಸಲಾಗುವುದು. ಉನ್ನತ ವಾರ್ಡ್/ಸ್ಪೆಷಲ್ ವಾರ್ಡಿಗೆ ಆಗುವ ಹೆಚ್ಚುವರಿ ವ್ಯತ್ಯಾಸದ ಚಿಕಿತ್ಸಾ ಮೊತ್ತವನ್ನುಸದರಿ ಫಲಾನುಭವಿಗಳೇ ಭರಿಸತಕ್ಕದ್ದು.