Yashaswini Card-2025: ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶ!

March 22, 2025 | Siddesh
Yashaswini Card-2025: ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶ!
Share Now:

ನಾಗರಿಕರು ಯಶಸ್ವಿನಿ ಯೋಜನೆಯಡಿ 5 ಲಕ್ಷದವರೆಗೆ ಉಚಿತ ಆರೋಗ್ಯ ಸೇವೆಗಳನ್ನು ಪಡೆಯಲು ಯಶಸ್ವಿನಿ ಕಾರ್ಡ ಅನ್ನು(yashaswini health card registration) ಮಾಡಿಸಲು ಅರ್ಜಿಯನ್ನು ಸಲ್ಲಿಸಲು ಇದೇ ತಿಂಗಳು ಅಂದರೆ 31 ಮಾರ್ಚ 2025 ಕೊನೆಯ ದಿನವಾಗಿದ್ದು ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅಧಿಕೃತ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

ರಾಜ್ಯ ಸರಕಾರದಿಂದ ಸಹಕಾರ ಇಲಾಖೆಯಡಿ ಅರ್ಹ ಸದಸ್ಯರಿಗೆ ಕಡಿಮೆ ಪ್ರೀಮಿಯಂ ಮೊತ್ತವನ್ನು ಪಾವತಿ ಮಾಡಿ ಆರೋಗ್ಯ ವಿಮೆಯನ್ನು ಮಾಡಿಸಿಕೊಳ್ಳಲು "ಯಶಸ್ವಿನಿ ಯೋಜನೆಯನ್ನು" ಜಾರಿಗೆ ತರಲಾಗಿದ್ದು ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

ಯಶಸ್ವಿನಿ ಯೋಜನೆಯ ಪ್ರಯೋಜನವನ್ನು ಪಡೆಯಲು ಯಾರೆಲ್ಲ ಅರ್ಹರು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲಾತಿಗಳು ಯಾವುವು? ಇನ್ನಿತರೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

Yashaswini Scheme Eligibility-ಯಶಸ್ವಿನಿ ಯೋಜನೆಯ ಪ್ರಯೋಜನವನ್ನು ಪಡೆಯಲು ಯಾರೆಲ್ಲ ಅರ್ಹರು?

(1) ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

(2) ಅರ್ಜಿದಾರರು ರಾಜ್ಯದಲ್ಲಿರುವ ಯಾವುದೇ ರೀತಿಯ ಸಹಕಾರಿ ಸಂಘದಲ್ಲಿ ಸದಸ್ಯರಾಗಿರಬೇಕು/ ಸಹಕಾರ ಸಂಘ/ಸೌಹಾರ್ದ ಸಹಕಾರಿಗಳು/ಸಹಕಾರ ಬ್ಯಾಂಕುಗಳು ಮತ್ತು ಗ್ರಾಮೀಣ ಸ್ವ-ಸಹಾಯ ಗುಂಪುಗಳಲ್ಲಿರುವ ಸದಸ್ಯರು ಕನಿಷ್ಠ 03 ತಿಂಗಳುಗಳ ಮುಂಚೆ ಸದಸ್ಯತ್ವವನ್ನು ಹೊಂದಿರಬೇಕು

(3) ಆರ್ಥಿಕವಾಗಿ ಅಭಿವೃದ್ದಿಯನ್ನು ಹೊಂದಿರುವವರು ಮತ್ತು ಕೇಂದ್ರ, ರಾಜ್ಯ ಸರಕಾರದ ನೌಕರಿಯಲ್ಲಿರುವವರು ಅರ್ಜಿ ಸಲ್ಲಿಸಲು ಬರುವುದಿಲ್ಲ.

(4) ಅರ್ಜಿದಾರರು ಖಾಸಗಿ ಕಂಪನಿ ಅಥವಾ ಇನ್ನಿತರೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು ಮಾಸಿಕ ರೂ.30,000/-ಕ್ಕಿಂತ ಹೆಚ್ಚಿನ ವೇತನವನ್ನು ಪಡೆಯುತ್ತಿದ್ದಲ್ಲಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಇದನ್ನೂ ಓದಿ: Diploma Certificate Courses-ಕೃಷಿ ವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಮಾಡುವ ಅರ್ಜಿ ಆಹ್ವಾನ!

yashashwini card

Yashaswini Card Application-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಯಶಸ್ವಿನಿ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ನಿಮ್ಮ ಹತ್ತಿರದ ವ್ಯವಸಾಯ ಸೇವಾ ಸಹಕಾರಿ ಸಂಘ/ಸೂಸೈಟಿ ಕಚೇರಿಯನ್ನು ನೇರವಾಗಿ ಅಗತ್ಯ ದಾಖಲಾತಿಗಳ ಸಮೇತ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Yashaswini Card Documents-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

  • ಅರ್ಜಿದಾರರ ಆಧಾರ್ ಕಾರ್ಡ ಪ್ರತಿ
  • ಪೋಟೋ
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ಕುಟುಂಬದ ರೇಶನ್ ಕಾರ್ಡ ಪ್ರತಿ
  • ಮೊಬೈಲ್ ನಂಬರ್

ಇದನ್ನೂ ಓದಿ: Subsidy Scheme-ಈ ಕಾರ್ಡ ಇದ್ದವರಿಗೆ ಹೆರಿಗೆ ವೆಚ್ಚ ಭರಿಸಲು ₹50 ಸಾವಿರ ಸಹಾಯಧನ!

Yashaswini Card-2025: ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶ:

ಅರ್ಹ ಅರ್ಜಿದಾರರು ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶವಿದ್ದು ಅರ್ಜಿಯನ್ನು ಸಲ್ಲಿಸಲು ಸಹಕಾರ ಇಲಾಖೆಯಿಂದ 31 ಮಾರ್ಚ 2025 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿದೆ.

Yashashvini Card Fee-ಯಶಸ್ವಿನಿ ಕಾರ್ಡ ನೋಂದಣಿ ಶುಲ್ಕ:

ಕುಟುಂಬ ಒಂದಕ್ಕೆ ವಾರ್ಷಿಕ ರೂ.500/-ಗಳ ಶುಲ್ಕ ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬಕ್ಕೆ ಪ್ರತಿಯೊಬ್ಬ ಪ್ರತಿಯೊಬ್ಬ ಸದಸ್ಯರಿಗೆ ರೂ.100/- ಶುಲ್ಕ ಪಾವತಿ ಮಾಡಬೇಕು.

ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.1000/- ಗಳ ವಂತಿಗೆ ಮತ್ತು ನಾಲ್ಕಕ್ಕಿಂತ ಹೆಚ್ಚಿಗಿ ಸದಸ್ಯರುಗಳ ಕುಟುಂಬದ ಪ್ರತಿಯೊಬ್ಬ ಹೆಚ್ಚುವರಿ ಸದಸ್ಯರಿಗೆ ರೂ.200/-ಗಳನ್ನು ಪಾವತಿಸದ್ದು.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯ ಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರದಿಂದಲೇ ವೆಚ್ಚ ಭರಿಸಲಾಗುತ್ತದೆ.

ಇದನ್ನೂ ಓದಿ: Agriculture Loan-13,689 ರೈತರ ಖಾತೆಗೆ ಶೂನ್ಯ ಬಡ್ಡಿದರದಲ್ಲಿ ₹589 ಕೋಟಿ ಸಾಲ!

Yashaswini Card benefits- ಯಶಸ್ವಿನಿ ಕಾರ್ಡ ಬಳಕೆ ಮಾಡಿಕೊಂಡು ಯಾವೆಲ್ಲ ವೈದ್ಯಕೀಯ ಚಿಕಿತ್ಸೆಗಳನ್ನು ಪಡೆಯಬಹುದು?

ಯಶಸ್ವಿನಿ ಯೋಜನೆಯಡಿಯಲ್ಲಿ ಟ್ರಸ್ಟ್ ಗುರ್ತಿಸಿದ 1650 ವಿವಿಧ ಚಿಕಿತ್ಸೆಗಳು ಮತ್ತು 478 ICU ಚಿಕಿತ್ಸೆಗಳೂ ಸೇರಿದಂತೆ ಒಟ್ಟು 2128 ಚಿಕಿತ್ಸೆಗಳನ್ನು ಅಳವಡಿಸಿಕೊಳ್ಳಲಾಗಿದೆ.

ರೋಗಿಗಳಿಗೆ ಸದರಿ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದಲ್ಲಿ ನೋಂದಾಯಿಸಿದ ಯಶಸ್ಸಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಒದಗಿಸಲಾಗುವುದು. ನೆಟ್ವರ್ಕ್ ಆಸ್ಪತ್ರೆಗಳನ್ನು ಹೊರತುವಡಿಸಿ ಇತರ ಆಸ್ಪತ್ರೆಗಳಲ್ಲಿ ಯಶಸ್ವಿನಿ ಯೋಜನೆಯ ಸೇವೆ ಲಭ್ಯವಿರುವುದಿಲ್ಲ. ಯಶಸ್ವಿನಿ ಯೋಜನೆಯಡಿ ಫಲಾನುಭವಿ ಚಿಕಿತ್ಸೆ ಪಡೆಯುವ ಮೊದಲು ಆಸ್ಪತ್ರೆಯು ಯೋಜನೆಗೆ ಒಳಪಟ್ಟಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು ನಂತರ ಚಿಕಿತ್ಸೆ ಪಡೆಯತಕ್ಕದ್ದು,

ಇದನ್ನೂ ಓದಿ: RTC Joint Owner-ನಿಮ್ಮ ಪಹಣಿಯಲ್ಲಿ ಜಂಟಿಯಿರುವ ಖಾತೆಯನ್ನು ಸರಿಪಡಿಸಿಕೊಳ್ಳುವುದು ಹೇಗೆ?

ಯೋಜನೆಯಲ್ಲಿ ಒಳಪಡದ ಚಿಕಿತ್ಸೆಗಳ ಮತ್ತು ಟ್ರಸ್ಟ್ ಅಂಗೀಕರಿಸದ ಆಸ್ಪತ್ರೆಗಳಲ್ಲಿ ಪಡೆದಂತಹ ಚಿಕಿತ್ಸೆಗಳಿಗೆ ಯಶಸ್ವಿನಿ ಟ್ರಸ್ಟ್ ಜವಾಬ್ದಾರರಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಆಸ್ಪತ್ರೆಗಳಿಗಾಗಲಿ ಅಥವಾ ಫಲಾನುಭವಿಗಳಿಗಾಗಲಿ ಚಿಕಿತ್ಸಾ ವೆಚ್ಚವನ್ನು ಪಾವತಿಸಲಾಗುವುದಿಲ್ಲ.

ಎರಡು ಜೀವಂತ ಮಕ್ಕಳು ಅಥವಾ ಎರಡು ಹರಿಗೆಗೆ ಮಾತ್ರ ಯಶಸ್ವಿನಿ ಯೋಜನೆಯಲ್ಲಿ ಸೌಲಭ್ಯ ದೊರೆಯುತ್ತದೆ.

ಯಶಸ್ವಿನಿ ಯೋಜನೆಯ ಪ್ರೋಟೋಕಾಲ್ ಪ್ರಕಾರ ಯಶಸ್ವಿನಿ ಫಲಾನುಭವಿಗಳು ಜನರಲ್ ವಾರ್ಡನಲ್ಲಿ ಮಾತ್ರ ಚಿಕಿತ್ಸೆ ಪಡೆಯಲು ಅರ್ಹರಿರುತ್ತಾರೆ. ಒಂದು ವೇಳೆ ಯೋಜನೆಯಡಿ ನಿಗದಿಪಡಿಸಿರುವ ಜನರಲ್ ವಾರ್ಡ್ ಬದಲಾಗಿ ಉನ್ನತ(Semi Special Ward Or Special Ward)ನಲ್ಲಿ ಚಿಕಿತ್ಸೆ ಪಡೆಯಲು ಇಚ್ಚಿಸಿದಲ್ಲಿ, ಸದರಿ ಫಲಾನುಭವಿಗಳಿಗೆ ಯೋಜನೆಯಡಿ ನಿಗದಿ ಪಡಿಸಿರುವಂತೆ ಜನರಲ್ ವಾರ್ಡಗೆ ಅನ್ವಯಿಸುವ ಚಿಕಿತ್ಸೆಯ ವೆಚ್ಚವನ್ನು ಮಾತ್ರ ಭರಿಸಲಾಗುವುದು. ಉನ್ನತ ವಾರ್ಡ್/ಸ್ಪೆಷಲ್ ವಾರ್ಡಿಗೆ ಆಗುವ ಹೆಚ್ಚುವರಿ ವ್ಯತ್ಯಾಸದ ಚಿಕಿತ್ಸಾ ಮೊತ್ತವನ್ನುಸದರಿ ಫಲಾನುಭವಿಗಳೇ ಭರಿಸತಕ್ಕದ್ದು.

WhatsApp Group Join Now
Telegram Group Join Now
Share Now: