- Advertisment -
HomeGovt SchemesYuva nidhi scheme-ಯುವನಿಧಿ ಯೋಜನೆ ನೋಂದಣಿ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

Yuva nidhi scheme-ಯುವನಿಧಿ ಯೋಜನೆ ನೋಂದಣಿ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕಾಲೇಜು ಶಿಕ್ಷಣ ಇಲಾಖೆಯಿಂದ ಯುವನಿಧಿ ಯೋಜನೆ(Yuva Nidhi Yojane) ನೋಂದಣಿ ಕುರಿತು ಮಹತ್ವದ ಆದೇಶವನ್ನು ಪ್ರಕಟಿಸಲಾಗಿದ್ದು ಇದರ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

ಯುವನಿಧಿ ವಿಶೇಷ ನೋಂದಣಿ(Yuva Nidhi Application) ಅಭಿಯಾನವನ್ನು ದಿನಾಂಕ: 06-01-2025 ರಿಂದ 20-01-2025 ರವರೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯೋಜಿಸುವ ಕುರಿತು ಕಾಲೇಜು ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

ನೂತನ ಆದೇಶದ ವಿವರ ಹೀಗಿದೆ ಸೂಚಿತ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗಿ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿದ ಮಹತ್ತರ ಯೋಜನೆಯಾಗಿರುತ್ತದೆ.

ಇದನ್ನೂ ಓದಿ: Kashi Yatra Subsidy-ನೀವೇನಾದರೂ ಕಾಶಿಯಾತ್ರೆ ಪ್ಲ್ಯಾನ್ ಮಾಡಿದ್ದೀರಾ? ಈ ಯೋಜನೆಯಡಿ ಸಿಗುತ್ತದೆ ಸಹಾಯಧನ!

ಈ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ 3,000/- ಮತ್ತು ಡಿಪ್ಲೋಮಾ(6 ಬೋರ್ಡ್‌ ಗಳಿಂದ) ತೇರ್ಗಡೆಯಾದವರಿಗೆ ಮಾಹೆಯಾನ ರೂ 1,500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ.

2023-24 ನೇ ಸಾಲಿನಲ್ಲಿ ತೇರ್ಗಡೆಯಾದ 5,27,273 ಅಭ್ಯರ್ಥಿಗಳ ದತ್ತಾಂಶವು ನ್ಯಾಡ್ ಪೋರ್ಟಲ್ ನಲ್ಲಿ ಅಪ್ ಲೋಡ್ ಆಗಿದ್ದರೂ ಸಹ ನಿರೀಕ್ಷಿತ ಮಟ್ಟದಲ್ಲಿ ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ನೋಂದಣಿಯಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋಂದಾಯಿಸಲು “ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ: 06-01-2025 ರಿಂದ 20-01-2025ರ ವರೆಗೆ ಹಮ್ಮಿಕೊಳ್ಳಲಾಗಿದ್ದು ಅಭ್ಯರ್ಥಿಗಳು ಈ ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕಾಗಿದೆ.

ಈ ಹಿನ್ನೆಲೆಯಲ್ಲಿ ಇಲಾಖಾ ವ್ಯಾಪ್ತಿಯ ಎಲ್ಲಾ ಪದವಿ/ ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಹಾಗೂ ಡಿಪ್ಲೋಮ ಕಾಲೇಜುಗಳ ಪ್ರಾಂಶುಪಾಲರುಗಳು 2023 ಹಾಗೂ 2024 ನೇ ಸಾಲಿನಲ್ಲಿ ತಮ್ಮ ಕಾಲೇಜುಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ನೋಂದಣಿಗಾಗಿ ತಮ್ಮ ಕಾಲೇಜುಗಳಲ್ಲಿ ಯುವನಿಧಿ ವಿಶೇಷ ನೋಂದಣಿ ಸಹಾಯ ಕೇಂದ್ರಗಳನ್ನು ತೆಗೆದು, ಕೇಂದ್ರಕ್ಕೆ ಅತ್ಯವಶ್ಯಕವಾಗಿ ಬೇಕಾದ ಗಣಕ ಯಂತ್ರ ವ್ಯವಸ್ಥೆ ಹಾಗೂ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲು ಸೂಚಿಸಲಾಗಿದೆ.

ಇದನ್ನೂ ಓದಿ: Land Registration-ರಾಜ್ಯ ಸರಕಾರದಿಂದ ಆಸ್ತಿ ಖಾತಾ ರಿಜಿಸ್ಟರ್‌ ಮಾಡಿಸಿಕೊಳ್ಳುವವರಿಗೆ ಸಿಹಿ ಸುದ್ಧಿ!

Yuva Nidhi Yojane

ಕಾಲೇಜು ಹಾಗೂ ಸ್ಥಳೀಯ ಮಟ್ಟದಲ್ಲಿ ಬ್ಯಾನರ್/ಪೋಸ್ಮರ್‌ಗಳನ್ನು ಅಳವಡಿಸಿ, ವ್ಯಾಪಕ ಪ್ರಚಾರವನ್ನು ಕೈಗೊಂಡು ಅರ್ಹ ಅಭ್ಯರ್ಥಿಗಳಿಂದ ಗರಿಷ್ಠ ಮಟ್ಟದ ನೋಂದಣಿ ಮಾಡಿಸುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ.

ಕಾಲೇಜುಗಳಲ್ಲಿ ಪ್ರಾಂಶುಪಾಲರು ಯುವನಿಧಿ ವಿಶೇಷ ನೋಂದಣಿ ಅಭಿಯಾನಕ್ಕಾಗಿ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿಗಳು ಹಾಗೂ ಐ.ಟಿ ಕೋ-ಆರ್ಡಿನೇಟರ್ ಗಳಿಗೆ ಉಸ್ತುವರಿಯನ್ನು ವಹಿಸಿ ಅರ್ಹ ಅಭ್ಯರ್ಥಿಗಳಿಂದ ಅತಿ ಹೆಚ್ಚು ನೋಂದಣಿ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವಂತೆ ಈ ಮೂಲಕ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Free Hostel-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Documents For Yuva Nidhi Yojane-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

1) ಅಭ್ಯರ್ಥಿಯ ಪದವಿ ಪ್ರಮಾಣಪತ್ರ / ಡಿಪ್ಲೊಮಾ ಪ್ರಮಾಣ ಪತ್ರ
2) ಅಭ್ಯರ್ಥಿಯ ಆಧಾರ್ ಕಾರ್ಡ್ ಪ್ರತಿ
3) ಬ್ಯಾಂಕ್ ಪಾಸ್ ಬುಕ್ ಪ್ರತಿ
4) ಅಭ್ಯರ್ಥಿಯ ಫೋಟೋ
5) ಜಾತಿ ಮತ್ತು ಆದಾಯ ಪ್ರಮಾಣ ಪತ್ರ
6) ನಿರುದ್ಯೋಗ ಪ್ರಮಾಣ ಪತ್ರ

Yuva Nidhi Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್- Apply Now

Yuva Nidhi Application

ಇದನ್ನೂ ಓದಿ: 2nd PUC Exam 2025- 2nd ಪಿಯುಸಿ ಮಾದರಿ ಪ್ರಶ್ನೆಪತ್ರಿಕೆ! ಇಲ್ಲಿದೆ ಡೌನ್ಲೋಡ್ ಲಿಂಕ್!

Yuva Nidhi Eligibility Criteria-ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಷರತ್ತು ಮತ್ತು ನಿಬಂಧನೆಗಳು:

1) ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ (Domicile of Karnataka) ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.

2) ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುವುದು.

3) ಭತ್ಯೆಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.

4) ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರರ್ಬೇಕು ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಇದನ್ನೂ ಓದಿ: Crop Loan Details- ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯುವುದು ಭಾರೀ ಸುಲಭ!

ಯೋಜನೆಗೆ ಅರ್ಹರಾಗದೇ ಇರುವವರು:

1) ಉನ್ನತ ವ್ಯಾಸಂಗಕ್ಕೆ, ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು.

2) ಶಿಶಿಕ್ಷು (Apprentice) ವೇತನವನ್ನು ಪಡೆಯುತ್ತಿರುವವರು.

3) ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.

4) ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು.

Yuva Nidhi Official Website-ಹೆಚ್ಚಿನ ಮಾಹಿತಿಗಾಗಿ ಯುವನಿಧಿ ಯೋಜನೆಯ ಅಧಿಕೃತ ವೆಬ್ಸೈಟ್- https://sevasindhugs.karnataka.gov.in/

- Advertisment -
LATEST ARTICLES

Related Articles

- Advertisment -

Most Popular

- Advertisment -