2024 ನೇ ವರ್ಷದಲ್ಲಿ ವ್ಯಾಸಂಗ ಮುಗಿಸಿರುವ ಅರ್ಹ ವಿದ್ಯಾರ್ಥಿಗಳಿಂದ ಯುವನಿಧಿ(Yuva nidhi) ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅಗತ್ಯ ದಾಖಲಾತಿಗಳೇನು? ಇತರೆ ಸಂಪೂರ್ಣ ವಿವರ ಇಲ್ಲಿ ತಿಳಿಸಲಾಗಿದೆ.
ಯುವನಿಧಿ ಯೋಜನೆಯಡಿ ಅಭ್ಯರ್ಥಿಯು ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿ 180 ದಿನಗಳು ಕಳೆದರೂ ಉದ್ಯೋಗ ದೊರೆಯದೇ ಇದ್ದ ಪಕ್ಷದಲ್ಲಿ ಇಂತಹ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಈ ಯೋಜನೆಯಡಿ ಅರ್ಥಿಕ ನೆರವು ನೀಡಲಾಗುತ್ತದೆ.
ಇದನ್ನೂ ಓದಿ: Scholarship application- ವಿದ್ಯಾಧನ ರೂ 55,000 ಸಾವಿರ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!
Yuva nidhi Subsidy amount- ಯುವನಿಧಿ ಯೋಜನೆಯಡಿ ಎಷ್ಟು ಅರ್ಥಿಕ ನೆರವು ನೀಡಲಾಗುತ್ತದೆ?
ಪದವಿ ಅಥವಾ ಡಿಪ್ಲೋಮಾ ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್‌ಗಳು ಸೇರಿದಂತೆ) ಪ್ರತಿ ತಿಂಗಳು ರೂ.3000/- ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1500/- ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ನೀಡಲಾಗುತ್ತದೆ.
Yuvanidhi eligibility criteria- ಅರ್ಜಿ ಸಲ್ಲಿಸಲು ಅರ್ಹರು:
1) ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ (Domicile of Karnataka) ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.
2) ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುತ್ತದೆ.
3) ಭತ್ಯೆಯನ್ನು DBT ಮೂಲಕ ವರ್ಗಾವಣೆ ಮಾಡಲಾಗುತ್ತದೆ, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುಬಹುದು.
4) ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುತ್ತದೆ.
ಇದನ್ನೂ ಓದಿ: BPL Card guidelines- ರಾಜ್ಯ ಸರಕಾರದಿಂದ ಈ ವರ್ಗಕ್ಕೆ ಸೇರಿದವರ ಬಿಪಿಎಲ್ ಕಾರ್ಡ ರದ್ದುಗೊಳಿಸಲು ಸೂಚನೆ!
ಇದನ್ನೂ ಓದಿ: Health Department- ಆರೋಗ್ಯ ಇಲಾಖೆಯಿಂದ ಮತ್ತೊಂದು ಜನಸ್ನೇಹಿ ಯೋಜನೆ ಜಾರಿ!
Yuva nidhi guidelines- ಅರ್ಜಿ ಸಲ್ಲಿಸಲು ಅನರ್ಹರು:
1) ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು.
2) ಶಿಶಿಕ್ಷು (Apprentice) ವೇತನವನ್ನು ಪಡೆಯುತ್ತಿರುವವರು.
3) ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.
4) ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ಮಯಂ ಉದ್ಯೋಗ ಹೊಂದಿದವರು.
Apply Method-ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ಎರಡು ವಿಧಾನ ಅನುಸರಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಒಂದು ನೇರವಾಗಿ ಸೇವಾ ಸಿಂಧು ಪೋರ್ಟಲ್ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬಹುದು.
Yuvanidhi Online application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್: APPLY NOW
ಇದನ್ನೂ ಓದಿ: RTC Crop Details-ಬೆಳೆ ವಿಮೆ,ಬೆಂಬಲ ಬೆಲೆ ಪ್ರಯೋಜನ ಪಡೆಯಲು ಬೆಳೆ ಮಾಹಿತಿ ಪಟ್ಟಿ ಬಿಡುಗಡೆ! ಆಕ್ಷೇಪಣೆ ಸಲ್ಲಿಸಲು ಅವಕಾಶ!
ಇದನ್ನೂ ಓದಿ: Bele vime amount- 17.61 ಲಕ್ಷ ರೈತರಿಗೆ 2,021 ಕೋಟಿ ಬೆಳೆ ವಿಮೆ ಕೃಷಿ ಸಚಿವ ಚಲುವರಾಯಸ್ವಾಮಿ!
ಅರ್ಜಿ ಸಲ್ಲಿಸಲು ದಾಖಲೆಗಳು:
1) ಅರ್ಜಿದಾರರ ಅಧಾರ್ ಕಾರ್ಡ
2) ಪೋಟೋ
3) ಅಂಕಪಟ್ಟಿ
4) ನಿರುದ್ಯೋಗ ಪ್ರಮಾಣ ಪತ್ರ
5) ಬ್ಯಾಂಕ್ ಪಾಸ್ ಬುಕ್
ಯುವನಿಧಿ ಯೋಜನೆಯ ಅಧಿಕೃತ ಮಾರ್ಗಸೂಚಿ: Download Now
ಗ್ಯಾರಂಟಿ ಯೋಜನೆಗಳ ಅಧಿಕೃತ ವೆಬ್ಸೈಟ್: Click here