Yuvanidhi Yojane-ನಿರುದ್ಯೋಗಿಗಳು ಪ್ರತಿ ತಿಂಗಳು ರೂ 3,000/- ಪಡೆಯಲು ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ!

May 4, 2025 | Siddesh
Yuvanidhi Yojane-ನಿರುದ್ಯೋಗಿಗಳು ಪ್ರತಿ ತಿಂಗಳು ರೂ 3,000/- ಪಡೆಯಲು ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ!
Share Now:

ರಾಜ್ಯ ಸರ್ಕಾರದಿಂದ ನಿರುದ್ಯೋಗಿ ಪದವೀಧರ ಯುವಕ ಮತ್ತು ಯುವತಿಯರಿಗೆ ಆರ್ಥಿಕವಾಗಿ ನೆರವು ನೀಡಲು ಯುವನಿಧಿ(Yuvanidhi Yojane) ಯೋಜನೆಯಡಿ ಪ್ರತಿ ತಿಂಗಳು ರೂ 3,000/- ವರೆಗೆ ಹಣವನ್ನು ಪಡೆಯಲು ಅವಕಾಶವಿದ್ದು, ಇದಕ್ಕಾಗಿ ಸ್ವಯಂ ಘೋಷಣೆಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ(Yuvanidhi Application) ಯೋಜನೆಯಡಿ 2023 ಮತ್ತು 2024 ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೋಮಾ ಶಿಕ್ಷಣವನ್ನು ಪಡೆದು ನಿರುದ್ಯೋಗಿ ಭತ್ಯೆಯನ್ನು ಪಡೆಯಲು ಈಗಾಗಲೇ ಅರ್ಜಿಯನ್ನು ಸಲ್ಲಿಸಿರುವವರು ಸ್ವಯಂ ಘೋಷಣೆಯನ್ನು ಸಲ್ಲಿಸಲು ಸರ್ಕಾರದಿಂದ ಅವಕಾಶವನ್ನು ಮಾಡಿಕೊಡಲಾಗಿದ್ದು,

ಇದನ್ನೂ ಓದಿ: SSLC Exam-ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ KSEEB ಮಂಡಳಿ!

ಇದಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿಯನ್ನು ಸಲ್ಲಿಸಲು(Unemploment Scholarship) ಅವಶ್ಯವಿರುವ ದಾಖಲಾತಿಗಳೇನು? ಯುವನಿಧಿ ಯೋಜನೆಯಡಿ ಪ್ರಯೋಜನ ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ.

Last Date-ಸ್ವಯಂ ಘೋಷಣೆ ಸಲ್ಲಿಸಲು ಮೇ 25 ಕೊನೆಯ ದಿನ:

ಯುವನಿಧಿ ಯೋಜನೆಯಡಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಸ್ವಯಂ ಘೋಷಣೆಯನ್ನು ಸಲ್ಲಿಸುವುದನ್ನು ಕಡ್ಡಾಯ ಮಾಡಲಾಗಿದ್ದು ಇದರನ್ವಯ ಪ್ರಸ್ತುತ ಮಾರ್ಚ, ಎಪ್ರಿಲ್ ಮತ್ತು ಮೇ ತಿಂಗಳವರೆಗಿನ ನಿರುದ್ಯೋಗಿ ಸ್ವಯಂ ದೃಡೀಕರಣ ಪ್ರಮಾಣ ಪತ್ರವನ್ನು ಆನ್ಲೈನ್ ಮೂಲಕ ಸಲ್ಲಿಸಲು 25 ಮೇ 2025 ಕೊನೆಯ ದಿನಾಂಕವಾಗಿದೆ.

ಇದನ್ನೂ ಓದಿ: Pumpset- ರೈತರಿಗೆ ಸಿಹಿ ಸುದ್ದಿ: 'ನವೀಕೃತ ಶೀಘ್ರ ಸಂಪರ್ಕ ಯೋಜನೆ'ಯಡಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ!

yuvanidhi application

Yuvanidhi Amount Details-ಪ್ರತಿ ತಿಂಗಳು ಎಷ್ಟು ಆರ್ಥಿಕ ನೆರವು ನೀಡಲಾಗುತ್ತದೆ?

ಯುವನಿಧಿ ಯೋಜನೆಯಡಿ ಅಧಿಕೃತ ಮಾರ್ಗಸೂಚಿಯನ್ವಯ ಈ ಕೆಳಗಿನ ಪದವಿಯನ್ನು ಪಡೆದಿರುವವರಿಗೆ ನಿರುದ್ಯೋಗ ಭತ್ಯೆಯನ್ನು ಪ್ರತಿ ತಿಂಗಳು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗುತ್ತದೆ.

1) ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ(ವೃತ್ತಿಪರ ಕೋಸ್ ಗಳು ಸೇರಿದಂತೆ)- 3,000/-ರೂ

2) ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ- 1,500/- ರೂ

ಇದನ್ನೂ ಓದಿ: Togari Bembala Bele-ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಕುರಿತು ಮತ್ತೊಂದು ಆದೇಶ ಪ್ರಕಟ!

Yuvanidhi Swayan Ghoshane Application-ಸ್ವಯಂ ಘೋಷಣೆಯನ್ನು ಸಲ್ಲಿಸುವುದು ಹೇಗೆ?

ಯುವನಿಧಿ ಯೋಜನೆಯಡಿ ಪ್ರತಿ ತಿಂಗಳು ಆರ್ಥಿಕ ನೆರವನ್ನು ಪಡೆಯಲು ಸ್ವಯಂ ಘೋಷಣೆಯನ್ನು ಸಲ್ಲಿಸುವುದು ಕಡ್ಡಾಯ ಮಾಡಲಾಗಿದ್ದು ಆನ್ಲೈನ್ ಮೂಲಕ ಅರ್ಜಿದಾರರು ನೇರವಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್/ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: ಮೊದಲಿಗೆ ಇಲ್ಲಿ ಕ್ಲಿಕ್ Apply Now ಮಾಡಿ ಅಧಿಕೃತ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Car Subsidy-ಸಬ್ಸಿಡಿಯಲ್ಲಿ ಕಾರ್ ಮತ್ತು ಆಟೋ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

yuvanidhi status

Step-2: ಇದಾದ ಬಳಿಕ ಈ ಪೇಜ್ ನಲ್ಲಿ ಬಳಕೆದಾರ ಐಡಿ ಮತ್ತು ಪಾಸ್ವರ್ಡ ಅನ್ನು ಹಾಕಿ ಕ್ಯಾಪ್ಚ್ ಕೋಡ್ ಅನ್ನು ನಮೂದಿಸಿ "Login" ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ಮಾಹಿತಿ ಮತ್ತು ದಾಖಲೆಯನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಸ್ವಯಂ ಘೋಷಣೆಯನ್ನು ಸಲ್ಲಿಸಬೇಕು.

ಆನ್ಲೈನ್ ಮೂಲಕ ಸ್ವಯಂ ಘೋಷಣೆಯನ್ನು ಸಲ್ಲಿಸಲು ವೆಬ್ಸೈಟ್ ಲಿಂಕ್- Apply Now

How Can Apply For Yuvanidhi Yojana-ಅರ್ಜಿ ಸಲ್ಲಿಸಲು ಅರ್ಹರು:

1) ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ (Domicile of Karnataka) ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.

2) ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುವುದು.

3) ಭತ್ಯೆಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.

4) ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಇದನ್ನೂ ಓದಿ: New Ration Card-ಹೊಸ BPL ಮತ್ತು APL ರೇಷನ್ ಕಾರ್ಡ ಪಡೆಯಲು ಅರ್ಹ ಸಲ್ಲಿಸಲು ಅವಕಾಶ!

Yuvanidhi Guidelines-ಯೋಜನೆಗೆ ಅರ್ಹರಾಗದೇ ಇರುವವರು:

1) ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು.

2) ಶಿಶಿಕ್ಷು (Apprentice) ವೇತನವನ್ನು ಪಡೆಯುತ್ತಿರುವವರು.

3) ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.

4) ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು.

For More Information-ಹೆಚ್ಚಿನ ಮಾಹಿತಿಗಾಗಿ:

ಯೋಜನೆಯ ಅಧಿಕೃತ ಜಾಲತಾಣ- Download Now
ಯೋಜನೆಯ ಅಧಿಕೃತ ಮಾರ್ಗಸೂಚಿ- Download Now
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್-Apply Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: